ಬೆಂಗಳೂರು : ಸಚಿವ ಶ್ರೀರಾಮುಲು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಅಂದ್ರೆ ಗಿಮಿಕ್, ಗಿಮಿಕ್ ಅಂದ್ರೆ ಕಾಂಗ್ರೆಸ್ ಇದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ಶ್ರೀರಾಮುಲು ಲೇವಡಿ ಮಾಡಿದ್ದಾರೆ. ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಎತ್ತಿನ ಗಾಡಿಯಲ್ಲಿ ಅಧಿವೇಶನಕ್ಕೆ ಆಗಮಿಸುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು. ಈ ಕುರಿತು ವಿಧಾನಸೌಧದ ಆವರಣದಲ್ಲಿ ಪ್ರತಿಕ್ರಿಯಿಸಿದ ಸಚಿವ ಶ್ರೀರಾಮುಲು, ಕಾಂಗ್ರೆಸ್ ಅಂದ್ರೆ ಗಿಮಿಕ್, ಗಿಮಿಕ್ ಅಂದ್ರೆ