ರಾಜ್ಯದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಸರಕಾರವಾಗಲಿ ಅಥವಾ ಬಿಜೆಪಿಯಾಗಲಿ ವಿಫಲವಾಗಿವೆ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರಗಾಲ ಕಾಡುತ್ತಿದೆ. ಆದಾಗ್ಯೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಯಾವುದೇ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಸಿದ್ದವಾಗಿಲ್ಲ. ವಿಪಕ್ಷವಾದ ಬಿಜೆಪಿ ಕೂಡಾ ಆರೋಪ, ಪ್ರತ್ಯಾರೋಪ ಮಾಡುವುದರಲ್ಲಿ ನಿರತವಾಗಿದೆ ಎಂದು ಕಿಡಿಕಾರಿದರು. ಬಿಜೆಪಿ ನಾಯಕರು ಮಂಗಳೂರು ಚಲೋ ಕಾರ್ಯಕ್ರಮಕ್ಕೆ ಆಸಕ್ತಿ ತೋರಿದಷ್ಟು ರಾಜ್ಯದ ರೈತರ ಬಗ್ಗೆ