ಬೆಂಗಳೂರು: ಎಲ್ಲಾ ಲೆಕ್ಕಾಚಾರದಂತೆ ನಡೆದಿದ್ದರೆ ಇಂದು ಕಾಂಗ್ರೆಸ್ ರಾಜ್ಯ ವಿಧಾನಸಭೆ ಚುನಾವಣೆಗೆ ಮೊದಲ ಪಟ್ಟಿ ನಿನ್ನೆ ಸಂಜೆ ಬಿಡುಗಡೆ ಮಾಡಬೇಕಿತ್ತು. ಆದರೆ ಸಿಎಂ ಸಿದ್ದರಾಮಯ್ಯ-ಮಲ್ಲಿಕಾರ್ಜುನ ಖರ್ಗೆ ನಡುವಿನ ಕಿತ್ತಾಟಕ್ಕೆ ಈ ಪಟ್ಟಿ ಬಲಿಯಾಯಿತು.ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಗೆ ಬಂದ ಸಿಎಂ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ತಮ್ಮದೇ ಆಯ್ಕೆಯ ಅಭ್ಯರ್ಥಿಗಳ ಪಟ್ಟಿ ಹಿಡಿದುಕೊಂಡು ಬಂದಿದ್ದರು. ಆದರೆ ಸಿಎಂ ನೀಡಿದ ಪಟ್ಟಿಯನ್ನು ಖರ್ಗೆ ಒಪ್ಪಲಿಲ್ಲ.ಪಟ್ಟಿಯಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಹೆಚ್ಚಿನ ಒತ್ತು ನೀಡಬೇಕೆಂಬುದು