ಬೆಂಗಳೂರು : ನಟ ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ ನೀಡುತ್ತಿರುವ ವಿಚಾರವನ್ನು ಸ್ವಾಗತಿಸುತ್ತೇನೆ. ಆದರೆ ಬಿಜೆಪಿಗೆ ಸುದೀಪ್ ಸಪೋರ್ಟ್ ಸಿಗುತ್ತಿರುವುದು ಕಾಂಗ್ರೆಸ್ನವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಟಾಂಗ್ ನೀಡಿದ್ದಾರೆ. ಬಿಜೆಪಿ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ ಬಿಜೆಪಿ ಕಚೇರಿಯಲ್ಲಿ ಪಕ್ಷದ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಯಡಿಯೂರಪ್ಪ, ಚಲನಚಿತ್ರದಲ್ಲಿ ಫೇಮಸ್ ಆಗಿರುವಂತಹ ವ್ಯಕ್ತಿ ಬಿಜೆಪಿಗೆ ಸಪೋರ್ಟ್ ಮಾಡುತ್ತೇನೆ ಎಂದು ಹೇಳಿರುವ ವಿಚಾರವನ್ನು ನಾನು ಸ್ವಾಗತ