ಕಾಂಗ್ರೆಸ್ ಹಾಗೂ ಕಮಿಷನ್ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಕಮಿಷನ್ ಜೊತೆ ಕಾಂಗ್ರೆಸ್ಸಿಗರು ನಡೆಯುತ್ತಾರೆ. ಸದ್ಯ ಅವರು ನಿರುದ್ಯೋಗಿಗಳಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ರಾಜ್ಯ ಹಾಗೂ ಕೇಂದ್ರದಲ್ಲಿ ಭ್ರಷ್ಟಾಚಾರ ರಹಿತ ಆಡಳಿತದಿಂದ 2023ರಲ್ಲೂ ಬಿಜೆಪಿ ಕರ್ನಾಟಕದಲ್ಲಿ ಪುನಃ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ. ಜಾತಿ, ಧರ್ಮದ ನಡುವೆ ಜಗಳ ಹಚ್ಚಿ, ಸಮಾಜ ಒಡೆದು ಆಳುವ