ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸುವ ಸಂದರ್ಭದಲ್ಲಿ ಸ್ಥಳೀಯ ಪೊಲೀಸರ ನೆರವು ಪಡೆಯದೆ ಕೇಂದ್ರದ ಸಿಆರ್ಪಿಎಫ್ ಭದ್ರತಾ ಪಡೆಗಳ ಸಹಾಯ ಪಡೆದಿದ್ದಾರೆ ಎಂದು ಕಾಂಗ್ರೆಸ್, ಕೇಂದ್ರ ಚುನಾವಣೆ ಆಯೋಗಕ್ಕೆ ದೂರು ನೀಡಿದೆ. ಕಾನೂನಿನ ಪ್ರಕಾರ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿರುವ ಸಂದರ್ಭದಲ್ಲಿ ಸ್ಥಳೀಯ ಪೊಲೀಸರ ನೆರವು ಪಡೆಯಬೇಕಾಗುತ್ತದೆ. ಆದರೆ, ಸ್ಥಳೀಯ ಪೊಲೀಸರ ನೆರವು ಪಡೆಯದೇ ಕೇಂದ್ರದ ಭದ್ರತಾ ಪಡೆಗಳ ನೆರವು ಪಡೆದಿರುವುದು ಕಾನೂನುಬಾಹಿರ ಎಂದು ಕಿಡಿಕಾರಿದೆ. ಸಿಎಂ