ರಾಜ್ಯದಲ್ಲಿ ಇತ್ತೀಚೆಗೆ ನಡೆದ ಐಟಿ ದಾಳಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರ ವಿರುದ್ಧ ನಗರದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಕಾಂಗ್ರೆಸ್ ವಕ್ತಾರ ಹಾಗೂ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಅವರು ಈ ಸಂಬಂಧಿಸಿದಂತೆ ದೂರನ್ನು ನೀಡಿದ್ದು, ಕೆಲವು ಟ್ವಿಟ್ಟರ್ ಖಾತೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಐಟಿ ದಾಳಿಯ ಸಂದರ್ಭದಲ್ಲಿ