ತ್ರಿವರ್ಣ ಧ್ವಜಕ್ಕಿಂತ ಮೇಲೆ ಎಬಿವಿಪಿ ಧ್ವಜ ಹಿಡಿದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮೆರವಣಿಗೆಯಲ್ಲಿ ಸಾಗಿದ್ದಾರೆಂಬ ವಿಷಯ ಸಾಕಷ್ಟು ಚರ್ಚೆಗೆ ಒಳಪಟ್ಟಿದೆ. ಈ ಕುರಿತಂತೆ ಸಚಿವರ ವಿರುದ್ಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಿಪಟೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ತ್ರಿವರ್ಣಧ್ವಜ ಯಾತ್ರೆಗೆ ಸಾವಿರಾರು ಮಕ್ಕಳು ಪಾಲ್ಗೊಂಡಿದ್ದರು. 180 ಅಡಿ ಉದ್ದದ ತಿರಂಗ ಯಾತ್ರೆಯಲ್ಲಿ ಶಿಕ್ಷಣ ಸಚಿವ ನಾಗೇಶ್ ಅವರು ಪಾಲ್ಗೊಂಡಿದ್ದರು. ಈ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ