ಬೆಂಗಳೂರು : ಕಾಂಗ್ರೆಸ್ನ ಸಂಸ್ಕೃತಿ ಯೂಸ್ ಆ್ಯಂಡ್ ಥ್ರೋ. ಚುನಾವಣೆ ಮುಗಿಯುವವರೆಗೆ ಬಿಜೆಪಿಯಿಂದ ಹೋದವರಿಗೆ ಸನ್ಮಾನ ಮಾಡುತ್ತಾರೆ. ಚುನಾವಣೆ ಮುಗಿದ ಮೇಲೆ ಅವರಿಗೆ ಅವಮಾನ ಮಾಡುವುದು ಕಾಂಗ್ರೆಸ್ನ ಸಂಸ್ಕೃತಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಪಕ್ಷವನ್ನು ಲೇವಡಿ ಮಾಡಿದರು. ಪ್ಲಾನ್ ಮಾಡಿ ನನ್ನನ್ನು ಬಿಜೆಪಿಯಿಂದ ಹೊರದಬ್ಬಿದ್ದಾರೆ ಎಂಬ ಜಗದೀಶ್ ಶೆಟ್ಟರ್ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಯಾರಾದರೂ ಪಕ್ಷ ಬಿಟ್ಟು ಹೋದಾಗ ಏನಾದರು ಒಂದು ಕಾರಣ ಕೊಡಬೇಕು.