ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಮಾತನಾಡಲು ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ಗೆ ಯಾವುದೇ ನೈತಿಕತೆಯಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದೇ ಕಾಂಗ್ರೆಸ್. ಅವರು ಮೃತಪಟ್ಟಾಗ ಶವಸಂಸ್ಕಾರಕ್ಕೂ ಆಗಿನ ಕಾಂಗ್ರೆಸ್ ನಾಯಕರು ಜಾಗ ನೀಡಲಿಲ್ಲ. ಅಂತಹ ಕಾಂಗ್ರೆಸ್ ನಾಯಕರು ಇದೀಗ ಅಂಬೇಡ್ಕರ್ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು. ದಲಿತರ ಮನೆಯಲ್ಲಿ ಬಿಜೆಪಿ ನಾಯಕರು ಊಟ