ಬೀದರ್ : ಕಾಂಗ್ರೆಸ್ 50 ವರ್ಷಗಳಿಂದ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡೋಕೆ ಆಗಿಲ್ಲ. ಇದೀಗ ಕಾಂಗ್ರೆಸ್ ಲಿಂಗಾಯತರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದೆ. ಅವರಿಗೆ ಯಾವ ನೈತಿಕ ಹಕ್ಕಿದೆ? ಎಂದು ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದರು. ಬಿಜೆಪಿ ಲಿಂಗಾಯತರಿಗೆ ಅನ್ಯಾಯ ಮಾಡಿದೆ ಎಂದು ಕಾಂಗ್ರೆಸ್ ಆರೋಪಕ್ಕೆ ಬೀದರ್ನ ಭಾಲ್ಕಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ, ಲಿಂಗಾಯತರು ಅಷ್ಟೇ ಅಲ್ಲಾ, ಎಲ್ಲಾ ಸಮುದಾಯಕ್ಕೆ ಮಾಡಿದ್ದನ್ನು ತಿಳಿಸಬೇಕಿದೆ.ನಾವು ಸಮಾಜವನ್ನು ಜೋಡಿಸುವ ಕೆಲಸ ಮಾಡುತ್ತೇವೆ.