ಕಾಂಗ್ರೆಸ್ ಸೇರುವ ಬಗ್ಗೆ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಹೊಸಪೇಟೆ ಬಿಜೆಪಿ ಶಾಸಕ ಆನಂದಸಿಂಗ್ ಸ್ಪಷ್ಟಪಡಿಸಿದ್ದಾರೆ. ಹೊಸಪೇಟೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಯ ವಿಚಾರದ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೇನೆ. ರಾಜಕೀಯದ ಬಗ್ಗೆ ಚರ್ಚೆ ಮಾಡಿಲ್ಲ ಎಂದು ತಿಳಿಸಿದ್ದಾರೆ. ಸ್ಥಳೀಯವಾಗಿರುವ ಕೆಲ ವಿಚಾರಗಳ ಬಗ್ಗೆ ಅಸಮಾಧಾನ ಇರುವುದರಿಂದ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಿಲ್ಲ. ಸದ್ಯದಲ್ಲಿ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ ಎಂದಿದ್ದಾರೆ. ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ