ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ, ಜೆಡಿಎಸ್ ಪಕ್ಷ ಸೇರ್ಪಡೆಯಾಗಲ್ಲ. ಅಷ್ಟಕ್ಕೂ ಈ ಬಗ್ಗೆ ಯಾವುದೇ ಚರ್ಚೆಯೂ ಆಗಿಲ್ಲ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಅಸಮಾಧಾನ ಜಿಲ್ಲೆಯ ಮಟ್ಟಿಗೆ ಸೀಮಿತವಾಗಿದ್ದು, ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ನಾನೂ ಕೂಡ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಯಾಗಿದ್ದು, ಎರಡು ಚುನಾವಣೆಗಳ ನಂತರ ಮುಖ್ಯಮಂತ್ರಿ ಹುದ್ದೆ ಕೇಳುತ್ತೇನೆ. ನನ್ನ ಬೆಂಬಲಿಗರಿಗೆ ಟಿಕೆಟ್