ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಗಂಭೀರವಾಗಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಚಾರದಲ್ಲಿ ಗೋವಾ ಕಾಂಗ್ರೆಸ್ ನಾಯಕರು ಒಂದು ಹನಿ ನೀರನ್ನು ಬಿಡುವುದಿಲ್ಲ ಎಂದು ಖಾರವಾಗಿ ಹೇಳಿಕೆ ನೀಡಿದ್ದು, ನೀರಿನ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಮಹದಾಯಿಗಾಗಿ ಸಿಎಂ ಸಿದ್ದರಾಮಯ್ಯ ಮೊದಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಮನವೊಲಿಸಬೇಕು ಎಂದು ಒತ್ತಾಯಿಸಿದರು. ಮಹದಾಯಿ ವಿಚಾರದಲ್ಲಿ