ಅಡ್ರೆಸ್ ಇಲ್ಲದವರ ಪಕ್ಷದಿಂದ ನಾನೇನು ಕಲಿಯಬೇಕಾಗಿಲ್ಲ. ದಾಖಲೆ ಇಲ್ಲದೇ ಸುಮ್ಮನೆ ಆರೋಪ ಮಾಡಿದರೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ಸಚಿವ ಅಶ್ವಥ್ ನಾರಾಯಣ್ ಕಾಂಗ್ರೆಸ್ ಮುಖಂಡರಿಗೆ ತಿರುಗೇಟು ನೀಡಿದ್ದಾರೆ. ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ಅಶ್ವಥ್ ನಾರಾಯಣ್ ಪಾತ್ರವಿಲ್ಲದೆ. ಅವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅಶ್ವಥ್ ನಾರಾಯಣ್, ಜೈಲಿಗೆ ಹೋಗಿ ಬಂದವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಅವರ