ಲೋಕ ಸಮರದಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವುದರಿಂದ ಕೈ ಪಡೆಯ ಪ್ರಮುಖರು ಒಬ್ಬೊಬ್ಬರಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ.ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಮಾಜಿ ಸಚಿವ ಹೆಚ್. ಕೆ. ಪಾಟೀಲ್.ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಹೆಚ್. ಕೆ. ಪಾಟೀಲ್ , ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಿದ ಮತದಾರರಿಗೆ ಧನ್ಯವಾದಗಳನ್ನು ಸಲ್ಲಿಸಿದ್ರು