ಬಜೆಟ್ ಮಂಡಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಫೇಮಸ್. ಆದರೆ, ಯೋಜನೆಗಳನ್ನು ಅನುಷ್ಠಾನಕ್ಕೆ ತರುವುದು ಮಾತ್ರ ಬೋಗಸ್ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ರಾಜ್ಯ ಸರಕಾರಕ್ಕೆ ಚಾಟಿ ಬೀಸಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ಅತೃಪ್ತ ಶಾಸಕರು ಬಿಜೆಪಿ ಸಿದ್ಧಾಂತ ಮೆಚ್ಚಿ ಬರುವುದಾದರೆ ಸ್ವಾಗತ. ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ವೈಯಕ್ತಿಕ ಆಸಕ್ತಿ ತೋರಿ ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಹೇಳಿದರು.