ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ವಿದ್ಯುತ್ ಕ್ಷಾಮ ತಂದಿಟ್ಟಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವು ಕಡೆ ಅಘೋಷಿತ ಲೋಡ್ ಶೆಡ್ಡಿಂಗ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರಿನಲ್ಲಿ ಮಾತ್ರ ಅಲ್ಲ ಇಡೀ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆಗ್ತಿದೆ. ರೈತರಿಗೆ ಕೇವಲ 3 ಗಂಟೆ ವಿದ್ಯುತ್ ಕೊಡುತ್ತಿದ್ದಾರೆ. ಅದೂ ರಾತ್ರಿ 12 ರಿಂದ 3 ಗಂಟೆಗೆ