ಕಾಂಗ್ರೆಸ್ ಸರಕಾರ ಹಗಲು ದರೋಡೆಯಲ್ಲಿ ತೊಡಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಬೆಲೆಯಿಲ್ಲವಾಗಿದೆ. ಭ್ರಷ್ಟರಿಗೆ ಮಾತ್ರೆ ಮಣೆಹಾಕಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ನಗರಾಭಿವೃದ್ಧಿ ಸಚಿವ.ಕೆ.ಜೆ.ಜಾರ್ಜ್ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ