ಹುಬ್ಬಳ್ಳಿ : ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಜವಬ್ದಾರಿ ಇಲ್ಲದ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು. ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರ ಬಂದಿದೆ. ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್ ಮಳೆ ತಡವಾಗಿದ್ದರಿಂದ ಬಿತ್ತನೆ ಕೂಡ ತಡವಾಗಿ ಆಗುತ್ತಿದೆ.ಮಾನ್ಸೂನ್ ಮಳೆ ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ ಭೀಕರ ಚಂಡಮಾರುತದ