ದಲಿತರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ನಾಯಕರಿಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. ತುರ್ತುಪರಿಸ್ಥಿತಿಯ ಕರಾಳ ದಿನ ಕುರಿತು ಆಯೋಜಿಸಿದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಜನತೆಯ ಮೇಲೆ ತುರ್ತುಪರಿಸ್ಥಿತಿ ಹೇರಿ ಇಂದಿಗೆ 42 ವರ್ಷಗಳಾಗಿವೆ. ಇಂದು ಸ್ವಾತಂತ್ರ್ಯ ಹೋರಾಟಗಾರರನ್ನು ಜೈಲಿಗೆ ಕಳುಹಿಸಿದ ದಿನವಾಗಿದೆ ಎಂದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮುಂಬೈನಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗ ಕಾಂಗ್ರೆಸ್ ಪಕ್ಷದವರೇ ಅವರ ಸೋಲಿಗೆ ಸಂಚು ರೂಪಿಸಿದ್ದರು.