ತೀವ್ರ ಕುತೂಹಲ ಕೆರಳಿಸಿರುವ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲುವು ಸಾಧಿಸಿದರೆ ಅದಕ್ಕೆ ಕಾಂಗ್ರೆಸ್ ಪಕ್ಷ ನೇರ ಹೊಣೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ರಾಜ್ಯಸಭಾ ಮತದಾನ ಅಂತ್ಯಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷಕ್ಕೆ ಇಬ್ಬರು ಶ್ರೀನಿವಾಸರು ಅಡ್ಡಮತದಾನ ಮಾಡುವ ಮೂಲಕ ಕುತ್ತು ತಂದಿದ್ದಾರೆ ಎಂದರು. ಮಾಜಿ ಸಿಎಂ ಸಿದ್ದರಾಮಯ್ಯ ಕೀಳುಮಟ್ಟದ ರಾಜಕೀಯವನ್ನ ಮಾಡುತ್ತಿದ್ದಾರೆ. ಜೆಡಿಎಸ್ ಶಾಸಕರಿಂದ ಅಡ್ಡ ಮತದಾನ