ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ವೈಖರಿ ಬಗ್ಗೆ ಕಾಂಗ್ರೆಸ್ ನ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಉಂಟಾಗಿರುವ ಅಸಮಾಧಾನದ ಹೊಗೆ ತಣ್ಣಗಾಗಿಸಲು ಹೈಕಮಾಂಡ್ ಮುಂದಾಗಿದೆ.ಸಮ್ಮಿಶ್ರ ಸರ್ಕಾರದ ಆಯಸ್ಸಿನ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆನ್ನಲಾದ ವಿಡಿಯೋ ಬಹಿರಂಗವಾಗುತ್ತಿದ್ದಂತೆ ರಾಜ್ಯ ನಾಯಕರ ಜತೆ ಉಸ್ತುವಾರಿ ಕೆಸಿ ವೇಣುಗೋಪಾಲ್ ಹೈಕಮಾಂಡ್ ನ ಸೂಚನೆ ರವಾನಿಸಿದ್ದಾರೆ.ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಥವಾ ಜೆಡಿಎಸ್ ವಿರುದ್ಧ, ಪರ ಹೇಳಿಕೆಗಳನ್ನು ಮಾಧ್ಯಮಗಳಿಗೆ, ಬಹಿರಂಗವಾಗಿ ನೀಡದಂತೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ. ಈ