ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜ ಬೇಕು ಎಂದು ಹೊರಟ ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ನಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಚುನಾವಣೆ ಹತ್ತಿರದಲ್ಲಿರುವಾಗ ಜನರಲ್ಲಿ ಗೊಂದಲ ಮೂಡಿಸುವಂತಹ ಇಂತಹ ವಿಚಾರಗಳನ್ನು ಸುಮ್ಮನೇ ಮೈ ಮೇಲೆ ಎಳೆದುಕೊಳ್ಳುವುದೇಕೆ ಎಂದು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಮೂಲಕ ಸಿಎಂಗೆ ಸಂದೇಶ ರವಾನಿಸಿದೆ ಎನ್ನಲಾಗಿದೆ.ಇದಕ್ಕೆ ಉತ್ತರಿಸಿರುವ ಸಿಎಂ ನಾವು ಸಂವಿಧಾನದಲ್ಲಿ ಇಂತಹದ್ದಕ್ಕೆ ಅವಕಾಶವಿದೆಯಾ ಎಂದು ಸಮಿತಿ ರಚನೆ ಮಾಡಿದ್ದೇವಷ್ಟೇ.