ಕಾಂಗ್ರೆಸ್ ನಲ್ಲೂ ಸಿಎಂ ಕುರ್ಚಿಗೆ ಪೈಪೋಟಿ: ಹೈಕಮಾಂಡ್ ನಿಂದ ಎಚ್ಚರಿಕೆ

ಬೆಂಗಳೂರು| Krishnaveni K| Last Modified ಮಂಗಳವಾರ, 22 ಜೂನ್ 2021 (09:39 IST)
ಬೆಂಗಳೂರು: ಇತ್ತೀಚೆಗಷ್ಟೇ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಕುರಿತಂತೆ ಭಾರೀ ವಿವಾದವಾಗಿತ್ತು. ಇದೀಗ ಕಾಂಗ್ರೆಸ್ ಸರದಿ. ವಿಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್ ನಾಯಕರು ಈಗಲೇ ಮುಂದಿನ ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಸಿದ್ದಾರೆ.
 > ಶಾಸಕ ಜಮೀರ್ ಅಹಮ್ಮದ್ ಪದೇ ಪದೇ ಸಿದ್ದರಾಮಯ್ಯ ಮುಂದಿನ ಸಿಎಂ ಎನ್ನುತ್ತಿರುವುದು ಇತರ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಮೀರ್ ಅಹಮ್ಮದ್ ಗೆ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎಂದಿರಲಿಲ್ಲ. ನಿನ್ನೆ ಡಾ. ಜಿ ಪರಮೇಶ್ವರ್ ಕೂಡಾ ನನ್ನ ಬೆಂಬಲಿಗರಿಗೂ ನಾನು ಸಿಎಂ ಆಗಬೇಕೆಂಬ ಆಸೆಯಿದೆ. ಆದರೆ ಕಾಂಗ್ರೆಸ್ ನಲ್ಲಿ ಎಲ್ಲವೂ ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದರು.>   ಈ ಎಲ್ಲಾ ಬೆಳವಣಿಗೆಗಳ ಬಳಿಕ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದೆ. ಈ ಬಗ್ಗೆ ಯಾವುದೇ ನಾಯಕರೂ ಬಹಿರಂಗ ಹೇಳಿಕೆ ನೀಡಬಾರದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಖಡಕ್ ಸೂಚನೆ ನೀಡಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :