ಕಲಬುರಗಿ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್ ಪಕ್ಷ, ಡ್ರೈವರ್ ಇಲ್ಲದ ಬಸ್ ತರಹ ಆಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಲೇವಡಿ ಮಾಡಿದರು. ನಗರದ ಐವನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಗುರುನೂ ಇಲ್ಲ, ಗುರಿಯೂ ಇಲ್ಲ. ಪ್ರಾದೇಶಿಕ ಪಕ್ಷಗಳನ್ನು ಕೊಲ್ಲಲು ಸಾಕಷ್ಟು ಪ್ರಯತ್ನ ಮಾಡಿದ ಕಾಂಗ್ರೆಸ್ ಇಂದು ಹೀನಾಯ ಸೋಲು ಅನುಭವಿಸಿದೆ