ಮಡಿಕೇರಿ : ಬಿಜೆಪಿಯವರಿಗೆ ಪಾದಯಾತ್ರೆಗಳು ಹೊಸದಲ್ಲ, ನಮ್ಮ ಹಲವು ಯಾತ್ರೆಗಳನ್ನು ಕಾಂಗ್ರೆಸ್ ಅವರು ಕಾಪಿ ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟೀಕಿಸಿದರು. ಮಡಿಕೇರಿಯಲ್ಲಿ ಗೋ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟನೆ ಮಾಡಿ ಮಾತಾನಾಡಿದ ಅವರು, ಕಾಂಗ್ರೆಸ್ನವರಿಗೆ ಟೀ ಅಂಗಡಿ ಹೇಗಿರುತ್ತೆ ಎನ್ನುವುದೇ ಗೊತ್ತಿರಲಿಲ್ಲ.ಮಕ್ಕಳು ಹೇಗೆ ಬೆಳೆಯುತ್ತವೆ ಎನ್ನುವುದು ಗೊತ್ತಿರಲಿಲ್ಲ. ಅವರು ಈಗ ಎಲ್ಲವನ್ನು ನೋಡುತ್ತಿದ್ದಾರೆ ಎಂದರು. ಕಾಂಗ್ರೆಸ್ ಅವರು ವೋಟಿಗಾಗಿ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದಾರೆ.