ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಸ್ಥಳೀಯ ಬಂಜಾರಾ ಸಮುದಾಯದ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ, ಗೃಹಸಚಿವ ಆರಗ ಜ್ಞಾನೇಂದ್ರ ಮಂಗಳವಾರ ಶಿಕಾರಿಪುರಕ್ಕೆ ತೆರಳಿ, ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಬಗ್ಗೆ ಅವಲೋಕನ ನಡೆಸಿದರು. ಲೋಕಸಭಾ ಸದಸ್ಯ ಬಿವೈ ರಾಘವೇಂದ್ರ, ಜಿಲ್ಲಾ ಪೋಲಿಸ್ ಮುಖ್ಯಸ್ಥ ಮಿಥುನ್ ಕುಮಾರ್ ಸೇರಿದಂತೆ ಸ್ಥಳೀಯ ಅಧಿಕಾರಿಗಳೂ ಉಪಸ್ಥಿತರಿದ್ದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಶಿಕಾರಿಪುರ ಪಟ್ಟಣದಲ್ಲಿ ಪರಿಸ್ಥಿತಿ ತಿಳಿಯಾಗಿದೆ. ಯಾವುದೇ ಅಹಿತಕರ ಘಟನೆ