ಸಿಎಂ ಆಗ್ತೇವೆ ಎಂದು ಕೆಲವರು ಶರ್ಟ್, ಪ್ಯಾಂಟ್ ಹೊಲಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯ ಮಾಡಿದ್ದಾರೆ. ಇಂದು ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು , ಸಿಎಂ ಆಗ್ತೇವೆ ಅಂತಾ ಕೆಲವರು ಕೋಟ್ ಹೊಲಿಸಲು ಅಂಗಡಿಗೆ ಕೊಟ್ಟಿದ್ದಾರೆ. ಇನ್ನೂ ಕೆಲವರು ಹೊಸ ಪ್ಯಾಂಟ್ ಶರ್ಟ್ ಖರೀದಿಸಿದ್ದಾರೆ. ಇನ್ನೂ ಕೆಲವರು ಅವರೊಳಗೇ ಪ್ಯಾಂಟ್, ಶರ್ಟ್ ಹರಿಯಲು ಶುರು ಮಾಡಿದ್ದಾರೆ. ಮೂರು ಪಾರ್ಟಿಯಲ್ಲಿ ಮೂರು