ಬೆಂಗಳೂರು : ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಗ್ನಿಪಥ್ ಒಂದು ವಿನೂತನ ಕಾರ್ಯಕ್ರಮ. ಇಡೀ ಜಗತ್ತಿನಲ್ಲಿ ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆ ಇದೆ. 17 – 21 ವರ್ಷ ಉತ್ತಮ ತರಬೇತಿ ಪಡೆದರೆ, ಬೇರೆ ಅವಕಾಶಗಳು ಸಿಗುತ್ತವೆ.