ಮುಖ್ಯಮಂತ್ರಿ ಕಚೇರಿಯಿಂದಲೇ ಪತ್ರಕರ್ತರಿಗೆ ನಗದು ರೂಪದಲ್ಲಿ ಲಂಚ ನೀಡಲಾಗಿದೆ ಎಂದು ಕಾಂಗ್ರೆಸ್ ಪಕ್ಷವು ಮಾಡಿರುವ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್ ಪಕ್ಷ ಸುಳ್ಳು ಸೃಷ್ಟಿಸುವ ಕೆಲಸ ಮಾಡುತ್ತಿದೆ. ಪತ್ರಕರ್ತರಿಗೆ ಗಿಫ್ಟ್ ಕೊಡಿ ಎಂದು ನಾನು ಯಾರಿಗೂ ಸೂಚಿಸಿಲ್ಲ. ಇದು ಕಾಂಗ್ರೆಸ್ ಟೂಲ್ ಕಿಟ್ನ ಮುಂದುವರಿದ ಭಾಗ. ಕಾಂಗ್ರೆಸ್ ಅವಧಿಯಲ್ಲಿ ಐ ಫೋನ್, ಚಿನ್ನದ ನಾಣ್ಯ ನೀಡಿದ್ದರು. ಈಗ ಆರೋಪ