ಬಿಬಿಎಂಪಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳು ಮೇಯರ್ ಚುನಾವಣೆ ನಡೆಯಲಿದೆ. ಆದರೆ, ಸದ್ಯಕ್ಕೆ ಮೇಯರ್ ಚುನಾವಣೆ ಬಗ್ಗೆ ಮಾತನಾಡುವುದು ಸೂಕ್ತವಲ್ಲ. ಸಮಯ ಬಂದಾಗ ಹೇಳಿಕೆ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಮುಂದುವರಿಯಲಿದೆ. ಉಭಯ ಪಕ್ಷಗಳ ನಡುವೆ ಯಾವುದೇ ತೊಂದರೆ ಎದುರಾಗಿಲ್ಲ.ಯಾಕೆ ಮುಂದುವರಿಯಬಾರದು ಎಂದು ತಿರುಗೇಟು ನೀಡಿದರು.