ಕಾಂಗ್ರೆಸ್ ಪಕ್ಷಕ್ಕೆ ಮುಜುಗುರವಾಗುವ ಘಟನೆಯೊಂದರಲ್ಲಿ, ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಹಿರಿಯ ಕಾಂಗ್ರೆಸ್ ಮುಖಂಡನೊಬ್ಬ, ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದು ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ. ಮಡಿಕೇರಿ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಮತ್ತು ಸಿಲ್ಕ್ ಬೋರ್ಡ್ ಪ್ರಸಕ್ತ ಅಧ್ಯಕ್ಷ ಟಿ.ಪಿ. ರಮೇಶ್, ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಕೈಯನ್ನು ಸಾರ್ವಜನಿಕರ ಸಮ್ಮುಖದಲ್ಲಿಯೇ ಹಿಡಿದಿರುವುದು ವಿವಾದಕ್ಕೆ ಕಾರಣವಾಗಿದೆ. ವೀಡಿಯೊದಲ್ಲಿ, ಕಾಂಗ್ರೆಸ್ ಎಂಎಲ್ಸಿ ವೀಣಾ ತನ್ನ ಕೈಯನ್ನು ಮುಂದೂಡುತ್ತಿರುವಂತೆ ರಮೇಶ್ ಲಘುವಾಗಿ ನಗುತ್ತಿರುವುದು ಕ್ಯಾಮರಾದಲ್ಲಿ