ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ರಾಜ್ಯದ ಕಾಂಗ್ರೆಸ್ ಮುಖಂಡರು ರಾಹುಲ್ ಗಾಂಧಿ ಅವರಿಗೆ ದೂರು ನೀಡಿದ್ದಾರೆ. ರಾಜ್ಯದ ಕಾಂಗ್ರೆಸ್ ಮುಖಂಡರಾದ ಖರ್ಗೆ, ಮುನಿಯಪ್ಪ, ಹಾಗು ಪರಂ ಅವರು ಸಿಎಂ ಸಿದ್ದರಾಮಯ್ಯ ಅವರು ಇತರ ನಾಯಕರನ್ನು ಕಡೆಗಣಿಸುತ್ತಿದ್ದಾರೆ. ಸರ್ಕಾರಿ ಜಾಹೀರಾತುಗಳಲ್ಲಿ ತಮ್ಮನ್ನು ವೈಭವೀಕರಿಸಿಕೊಳ್ಳುತ್ತಿದ್ದಾರೆ. ಕೂಡಲೇ ಅವರ ವರ್ತನೆಗೆ ಬ್ರೇಕ್ ಹಾಕಿ ಎಂದು ಹೈಕಮಾಂಡ್ ಗೆ ದೂರು ನೀಡಿದ್ದಾರೆ. ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ