ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಕಾಂಗ್ರೆಸ್ ನಾಯಕ

ಮೈಸೂರು| pavithra| Last Modified ಶುಕ್ರವಾರ, 8 ನವೆಂಬರ್ 2019 (11:03 IST)
ಮೈಸೂರು : ಇಂದು ಕಾಂಗ್ರೆಸ್ ನಾಯಕ ಮಾಜಿ ಸಚಿವ  ಡಿಕೆ ಶಿವಕುಮಾರ್  ಮೈಸೂರಿನ ಚಾಮುಂಡೇಶ್ವರಿ ಸನ್ನಿದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಇಂದು 2ನೇ ದಿನದ ಪ್ರವಾಸದಲ್ಲಿರುವ ಡಿಕೆ ಶಿವಕುಮಾರ್ ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಈಡುಗಾಯಿ ಒಡೆದಿದ್ದಾರೆ. ಅದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೂಡ ಚಾಮುಂಡೇಶ್ವರಿ ಸನ್ನಿಧಿಗೆ ಆಗಮಿಸಿದ್ದು, ಅವರನ್ನು ನೋಡುತ್ತಿದ್ದಂತೆ ಡಿಕೆಶಿ ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.


ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಸೋನಿಯಾ ಗಾಂಧಿ ಸುಧಾರಿಸಿಕೊಳ್ಳಲೆಂದು ಪೂಜೆ ಮಾಡಿಸಿದ್ದೇನೆ. ಸೋನಿಯಾ ಗಾಂಧಿ ಹೆಸರಿನಲ್ಲಿ ಪೂಜೆ ಮಾಡಿಸುವಂತೆ ಅರ್ಚಕರಿಗೆ ಹೇಳಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :