ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತುಮಕೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಜಮೀರ್ ಅಹ್ಮದ್ ಖಾನ್ ಅವರನ್ನು ಕಣಕ್ಕಿಳಿಸಿದರೆ ಗೆಲುವು ಖಚಿತ ಎನ್ನುವುದು ಕಾಂಗ್ರೆಸ್ ಮುಖಂಡರ ಲೆಕ್ಕಾಚಾರವಾಗಿದೆ. ಮುಸ್ಲಿಮರನ್ನು ಒಂದುಗೂಡಿಸಬಹುದು. ಒಂದು ವೇಳೆ ಅವರು ತಮ್ಮ ಭದ್ರಕೋಟೆಯಾದ ಚಾಮರಾಜಪೇಟೆಯನ್ನು ಸಿದ್ದರಾಮಯ್ಯನವರಿಗೆ ಬಿಟ್ಟುಕೊಟ್ಟರೆ ತುಮಕೂರಿನಿಂದ ಜಮೀರ್ಗೆ ಟಿಕೆಟ್ ನೀಡಲು ಕಾಂಗ್ರೆಸ್ ಪಕ್ಷ ಲೆಕ್ಕಾಚಾರ ಹಾಕಿದೆ ಎನ್ನಲಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗಾಗಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟು, 2023ರ ವಿಧಾನಸಭೆ ಚುನಾವಣೆಯಲ್ಲಿ ಜಮೀರ್ ತುಮಕೂರಿನಿಂದ