ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ನಾಯಕರು ವಿಪಕ್ಷ ಸ್ಥಾನದಲ್ಲಿದ್ದರೂ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ಕನಸಿನಲ್ಲಿದ್ದಾರೆ. ಇದರ ಮಧ್ಯೆ ಈಗಲೇ ಸಿಎಂ ಸ್ಥಾನಕ್ಕಾಗಿ ನಾಯಕರ ನಡುವೆ ಕಿತ್ತಾಟ ಜೋರಾಗಿದೆ. ಕೂಸು ಹುಟ್ಟುವ ಮುನ್ನ ಕುಲಾವಿ ಎನ್ನುವ ಹಾಗೆ ಸಿದ್ದರಾಮಯ್ಯನವರಿಂದ ಹಿಡಿದು, ಮುನಿಯಪ್ಪ, ಡಿಕೆ ಶಿವಕುಮಾರ್, ಡಾ. ಜಿ ಪರಮೇಶ್ವರ್ ಸೇರಿದಂತೆ ಹಲವರು ಸಿಎಂ ಹುದ್ದೆಯ ಆಕಾಂಕ್ಷಿ ಎಂದು ಪರೋಕ್ಷವಾಗಿ ಸಾರಿದ್ದಾರೆ.ಇದು ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿದೆ. ಈಗಲೇ ಈ ರೀತಿ ನಾಯಕರಲ್ಲಿ ಭಿನ್ನಮತ