ತುಮಕೂರು : ಕುಮಾರಸ್ವಾಮಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ನವರು ಸಂಚು ನಡೆಸುತ್ತಿದ್ದಾರೆ ಎಂದು ಬಿಜೆಪಿಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿಎಸ್ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಕಾಂಗ್ರೆಸ್ ನ ಮೂವರು ಮುಖಂಡರಿಂದ ಸಂಚು ನಡೆಯುತ್ತಿದೆ. ಅವರು ಕುಮಾರಸ್ವಾಮಿಯನ್ನು ಕೆಳಗಿಳಿಸಲು ಹೊಂಚು ಹಾಕುತ್ತಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಹೊಸ ಬಾಂಬ್ ವೊಂದನ್ನು ಸ್ಪೋಟಿಸಿದ್ದಾರೆ. ಅಲ್ಲದೇ ಹಿರಿಯ ಮೂವರು ಮುಖಂಡರಿಂದ ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ. ಅವರಲ್ಲಿ ಒಬ್ಬ ಸಚಿವರು, ಇನ್ನಿಬ್ಬರು ಸಚಿವ ಸ್ಥಾನ