ಬೆಂಗಳೂರು : ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಣಕ್ಕೀಳಿಯಲು ಮುಂದಾದ ದೇವೇಗೌಡರಿಗೆ ಕಾಂಗ್ರೆಸ್ಸಿನ ಶಾಸಕರು ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ. ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟ ದೇವೇಗೌಡರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಬೇಕೆ ಎಂದು ಚಿಂತನೆ ನಡೆಸುತ್ತಿರುವಾಗಲೇ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಾಸಕರಾದ ಎಸ್.ಟಿ. ಸೋಮಶೇಖರ್, ಬೈರತಿ ಸುರೇಶ್, ಬೈರತಿ ಬಸವರಾಜು, ಅಖಂಡ ಶ್ರೀನಿವಾಸಮೂರ್ತಿ ಈ ಷರತ್ತುಗಳನ್ನು ಈಡೇರಿಸಿದ್ದರಷ್ಟೇ ದೇವೇಗೌಡರ ಪರ ಕೆಲಸ ಮಾಡೋದಾಗಿ ಹೇಳಿದ್ದಾರೆ