ಕಾಂಗ್ರೆಸ್ನಲ್ಲೂ ವೀರಶೈವ ನಾಯಕರಿದ್ದು ಪಕ್ಷದಲ್ಲಿರುವ ವೀರಶೈವರು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ. ಯಡಿಯೂರಪ್ಪ ಅವರಿಗೆ ಈಗ ವೀರಶೈವರ ನೆನಪಾಗಿದೆ. ಇಷ್ಟು ದಿನ ಎಲ್ಲಿ ಹೋಗಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಬಂದ ಕೂಡಲೇ ಅವರಿಗೆ ವೀರಶೈವರ ನೆನಪಾಗುತ್ತದೆ ಎಂದು ಲೇವಡಿ ಮಾಡಿದ್ದಾರೆ. ಉಪಚುನಾವಣೆ ನಡೆಯುತ್ತಿರುವ ಗುಂಡ್ಲುಪೇಟೆ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸುವುದು ಖಚಿತವಾಗಿದೆ