ಕಾಂಗ್ರೆಸ್ ಪಕ್ಷದ್ದು ಎಲೆಕ್ಷನ್ ಹಿಂದುತ್ವ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರಳಿಧರರಾವ್ ವ್ಯಂಗ್ಯವಾಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚುನಾವಣೆ ಬಂದಾಗ ಮಾತ್ರ ಹಿಂದೂಗಳು ನೆನಪಾಗುತ್ತಾರೆ ಎಂದು ಟೀಕಿಸಿದ್ದಾರೆ. ರಾಹುಲ್ ಗಾಂಧಿ ಚುನಾವಣೆ ಸಮೀಪಿಸಿರುವುದರಿಂದ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಅವರಿಗೆ ಹಿಂದೂಗಳ ಬಗ್ಗೆ ನಿಜವಾದ ಕಾಳಜಿಯಿಲ್ಲ. ಅವರದು ಚುನಾವಣೆಯ ಗಿಮಿಕ್ ಮಾತ್ರ ಎಂದು ಆರೋಪಿಸಿದ್ದಾರೆ. ಇದೇ ವೇಳೆ ನರೇಂದ್ರ ಮೋದಿ