ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಇಂದಿರಾ ಕ್ಯಾಂಟಿನ್ ಮಾಡಿಕೊಂಡು ಶೋಕಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ., ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜಲಾವೃತ್ತಗೊಂಡ ಕೆಲ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಸಂಪೂರ್ಣ ಕಾರ್ಯನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನ ಜನತೆ ಮಳೆಯಿಂದ ತತ್ತರಿಸಿದ್ದಾರೆ. ಆದಾಗ್ಯೂ, ಸರಕಾರ ಸಮರೋಪಾದಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಂಡಿಲ್ಲ.