ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ರಾಯಚೂರಿನಲ್ಲಿ ಸಮಾವೇಶ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ. ರಾಯಚೂರಿನಲ್ಲಿ ಆಗಸ್ಟ್ 12 ರಂದು ನಡೆಯಲಿರುವ ಪಕ್ಷದ ಸಮಾವೇಶದಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಸಮಾವೇಶದಲ್ಲಿ ರಾಜ್ಯ ಧ್ವಜ ಮತ್ತು ಪ್ರತ್ಯೇಕ ಲಿಂಗಾಯುತ ಧರ್ಮ ಕುರಿತಂತೆ ಕೆಲ ವಿಷಯಗಳು ಚರ್ಚೆಗೆ ಬರಲಿವೆ ಎಂದು ವಿವರಣೆ ನೀಡಿದ್ದಾರೆ. ಪ್ರತ್ಯೇಕ ಧರ್ಮ ಸೂಕ್ಷ್ಮ ವಿಚಾರವಾಗಿದ್ದರಿಂದ ಪಕ್ಷದ ವೇದಿಕೆಯಲ್ಲಿ ಚರ್ಚೆ