ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಭ್ರಷ್ಟಾಚಾರ ಮತ್ತು ಆತ್ಮಹತ್ಯೆಗೆ ಪ್ರೇರಣೆ ಆರೋಪ ಎದುರಿಸುತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ರು. ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕಾಂಗ್ರೆಸ್ ನಾಯಕರು ಈ ಮೊದಲೇ ಘೋಷಿಸಿದ್ದ ಹಿನ್ನೆಲೆಯಲ್ಲಿ ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಹಾಕಲಾಗಿತ್ತು. ಭದ್ರತೆಗೆ 250ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ