ಚುನಾವಣೆ ಕಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಹತ್ವದ ಕ್ಷೇತ್ರದಲ್ಲಿ ಜೆಡಿಎಸ್ ವಿರುದ್ಧ ಕಾಂಗ್ರೆಸ್ ನಾಯಕರು ತಿರುಗಿ ಬಿದ್ದು ಪ್ರತಿಭಟನೆ ನಡೆಸಿದ್ದಾರೆ.ಸಂಸದ ಮುದ್ದಹನುಮೇಗೌಡರಿಗೆ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜೆಡಿಎಸ್ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.ತುಮಕೂರು ಕ್ಷೇತ್ರವನ್ನ ಕಾಂಗ್ರೆಸ್ ಬಿಟ್ಟು ಕೊಡುವಂತೆ ಆಗ್ರಹ ಮಾಡಿದ ಧರಣಿ ನಿರತರು, ಮುದ್ದಹನುಮೇಗೌಡರಿಗೆ ಟಿಕೆಟ್ ನೀಡುವಂತೆ ಒತ್ತಾಯ ಮಾಡಿದ್ರು.ತುಮಕೂರಿಗೆ ರಾಹುಲ್ ಗಾಂಧಿ ಬಂದರೆ ಸ್ವಾಗತ ಕೋರಲಾಗುವುದು.