ಸಿ ಫೋರ್ ನಡೆಸಿದ ಸಮೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷ 126 ಕ್ಷೇತ್ರಗಳಲ್ಲಿ ಜಯಗಳಿಸಿ ಭಾರಿ ಬಹುಮತದಿಂದ ಮತ್ತೆ ಸರಕಾರ ರಚಿಸಲಿದೆ ಎಂದು ಹೇಳಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪಟ್ಟಣ ಮತ್ತು ಗ್ರಾಮಾಂತರ ಕ್ಷೇತ್ರಗಳಲ್ಲಿ 22,357 ಮತದಾರರನ್ನು ಭೇಟಿ ಮಾಡಿ ಸಮೀಕ್ಷೆ ಮಾಡಲಾಗಿದ್ದು, ಕಾಂಗ್ರೆಸ್ ಪಕ್ಷ ಮತ್ತೆ ಸರಕಾರ ರಚಿಸುವುದು ಬಹುತೇಕ ಖಚಿತ ಎಂದು ತಿಳಿಸಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಶೇ.46 ರಷ್ಟು ಮತಗಳನ್ನು ಪಡೆಯಲಿದ್ದು, ವಿಪಕ್ಷವಾದ ಬಿಜೆಪಿ