ಚುನಾವಣೆ ಘೋಷಣೆಯಾದ ನಂತರ ಚುನಾವಣಾ ಅಖಾಡ ರಂಗೇರಿದೆ.. ಕಾಂಗ್ರೆಸ್, JDS ಟಿಕೆಟ್ ಘೋಷಣೆ ಮಾಡಿದ್ರೆ, BJP ಇನ್ನೂ ಟಿಕೆಟ್ ಫೈನಲ್ ಮಾಡಿಲ್ಲ. ಮೊದಲ ಪಟ್ಟಿ ಬಿಡುಗಡೆ ಮಾಡಿ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಗೆ ಕಸರತ್ತು ನಡೆಸಿದೆ.. ನಾಳೆ ದೆಹಲಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ.. ಕಾಂಗ್ರೆಸ್ ಈಗಾಗಲೇ 124 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿದೆ.. ಕಾಂಗ್ರೆಸ್ ಹೈಕಮಾಂಡ್ ಉಳಿದ 100 ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಲಿದೆ..