ಬೆಂಗಳೂರು : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಈ ವೇಳೆಯಲ್ಲಿ ಕಾಂಗ್ರೆಸ್ ವಕ್ತಾರ ಸುರ್ಜೆವಾಲ, ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಅವರ ಡೈರಿ ಬಿಡುಗಡೆ ಮಾಡಿದ್ದು, ಈಗ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ಬಿಜೆಪಿ ಕೇಂದ್ರ ನಾಯಕರಿಗೆ 1,800 ಕೋಟಿ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಈ ಬಗ್ಗೆ ಡೈರಿಯಲ್ಲಿ ಉಲ್ಲೇಖವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಡೈರಿಯೊಂದನ್ನೂ ಬಿಡುಗಡೆ