ಬೆಂಗಳೂರು, ಸೆ.19 : ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಬಿಜೆಪಿ ಜೊತೆ ಕೈ ಜೋಡಿಸಲಿದೆ ಎಂಬ ಸುಳಿವು ಸಿಗುತ್ತಿದ್ದಂತೆ ಸಿಟ್ಟಾಗಿರುವ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತದ ಮೂಲಕ ಜೆಡಿಎಸ್ನ ಹಲವಾರು ನಾಯಕರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳಲು ವೇದಿಕೆ ಸಜ್ಜುಗೊಳಿಸುತ್ತಿದ್ದಾರೆ. ಶಾಸಕರಾಗಿರುವ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ, ಕೋಲಾರದ ಶ್ರೀನಿವಾಸಗೌಡ ಅವರು ಕಾಂಗ್ರೆಸ್ ಸೇರುವುದಾಗಿ ಬಹಿರಂಗ ಹೇಳಿಕೆ ನೀಡಿದ್ದಾರೆ. ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಮಾನಸಿಕವಾಗಿ ಕಾಂಗ್ರೆಸ್ ಜೊತೆ ಗುರುತಿಸಿಕೊಳ್ಳುತ್ತಿದ್ದಾರೆ. ಮಾಜಿ ಶಾಸಕ ಕೋನರೆಡ್ಡಿ