ಲೋಕಸಭೆಯಲ್ಲಿ ಹುಡುಕಿದರೂ ಕಾಂಗ್ರೆಸ್ ಸಂಸದರು ಕಾಣಿಸಬಾರದು. ಅಂತಹ ಪರಿಸ್ಥಿತಿ ನಿರ್ಮಾಣವಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ತುರ್ತುಪರಿಸ್ಥಿತಿಯ ಕರಾಳ ನೆನಪು ಕುರಿತು ಪಕ್ಷದ ಕಚೇರಿಯಲ್ಲಿ ಆಯೋಜಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಯಪ್ರಕಾಶ್ ನಾರಾಯಣ್ರನ್ನು ಜೈಲಿನಲ್ಲಿಟ್ಟು ಕೊಂದಿದ್ದೇ ಕಾಂಗ್ರೆಸ್ಸಿಗರು ಎಂದು ಆಕ್ರೋಷ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ 70 ವರ್ಷಗಳ ಅವಧಿಯಲ್ಲಿ ಭ್ರಷ್ಟಾಚಾರ ಹೆಮ್ಮರವಾಗಿ ಬೆಳೆದಿದೆ. ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಲು ಕಾಂಗ್ರೆಸ್ ಪಕ್ಷದವರೇ ಕಾರಣವಾಗಿದ್ದಾರೆ ಎಂದು ಆರೋಪಿಸಿದರು.